
:ಕಲ್ಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಭೋಸಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಐಶ್ವರ್ಯ ಭೀಮಣ್ಣ ಜಮಾದಾರ್ ಅವರು, ಕಲ್ಬುರ್ಗಿಯಲ್ಲಿ ನಡೆದ 2025–26ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ‘ಅಂಡರ್ 14 ಬಾಲಕಿಯರ ಗುಂಡು ಎಸೆತ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ತಾಲೂಕಿನ ಗ್ರಾಮೀಣ ಶಾಲೆಯ ವಿದ್ಯಾರ್ಥಿನಿಯಾದ ಐಶ್ವರ್ಯ ಅವರು ತೋರಿದ ಈ ಸಾಧನೆಗೆ ಶಾಲೆಯ ಮುಖ್ಯಗುರು ಮಲ್ಲಪ್ಪ ದೇಗಿನಾಳ, ದೈಹಿಕ ಶಿಕ್ಷಣ ಶಿಕ್ಷಕ ದತ್ತಪ್ಪ ಗೂಂದಳಿ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯ ಪಾಲಕರು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.ಐಶ್ವರ್ಯ ಅವರ ಈ ಸಾಧನೆ ಗ್ರಾಮಸ್ಥರ ಹೆಮ್ಮೆಯ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಅವರು ವಿಭಾಗ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಊರಿನ ಕೀರ್ತಿಯನ್ನು ಹೆಚ್ಚಿಸಲಿ ಎಂದು ಎಲ್ಲರೂ ಶುಭ ಹಾರೈಸಿದ್ದಾರೆ .
ವರದಿ :
ಇಮ್ರಾನ್ ಮನಿಯಾರ
